ತುಮಕೂರು: ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರಿನ ದೇವರಾಯನದುರ್ಗ ಅರ್ಚಕನ ಮೇಲೆ ಯುವಕರಿಬ್ಬರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಅರ್ಚಕ ನಾಗಭೂಷಣಾಚಾರ್ಯಗೆ ಮಹಿಳೆಯರು, ಇಬ್ಬರು ಯುವಕರು ಸೇರಿಕೊಂಡು ಕೋಲಿನಿಂದ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ. ಅನುಚಿತ ವರ್ತನೆಗೆ ಮಾಡಿರುವುದಕ್ಕೆ ಕಾಲಿಗೆ ಬಿದ್ದು ಕ್ಷಮೆ ಕೇಳುವಂತೆ ಒತ್ತಾಯಿಸಿ, ಆತ ಕಾಲಿಗೆ ಬಿದ್ದು ನಮಸ್ಕರಿಸುವ ಸಂದರ್ಭದಲ್ಲಿಯೂ ಕೋಲಿನಿಂದ ಮನಸೋಇಚ್ಚೇ ಹೊಡೆದಿದ್ದಾರೆ. ನಾಲ್ಕು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗ ಬೆಳಕಿಗೆ ಬಂದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ಯ, ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Link : https://x.com/SinghKinngSP/status/1959578511636865083