ಬೆಂಗಳೂರು: ನೀವೇನಾದರೂ ಬಾಗಲಕೋಟೆ ಜಿಲ್ಲೆಯವರಾಗಿದ್ದು, ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಅದರಲ್ಲೂ ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಬಾಗಲಕೋಟೆ ಜಿಲ್ಲೆ ನವಲಗಿಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ (Primary Agriculture Cooperative Society Navalagi Recruitment 2025) ಖಾಲಿ ಇರುವ ಮೂರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪ್ರಾಥಮಿಕ ಕೃಷಿ ಸಹಕಾರ ಸಂಘ
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 21
ಹುದ್ದೆಯ ಹೆಸರು: ಕ್ಲರ್ಕ್
ನವಲಗಿಯಲ್ಲಿರುವ ಸಂಘದ ಕಚೇರಿಯಲ್ಲಿ ಕ್ಲರ್ಕ್, ಸೇಲ್ಸ್ ಮ್ಯಾನ್ ಹಾಗೂ ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಹಾಗೂ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಂಡ ಬಳಿಕ, ಅರ್ಜಿ ನಮೂನೆಯ ಪ್ರಿಂಟ್ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ Primary Agriculture Cooperative Society Navalagi, 587311 ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಇದನ್ನೂ ಓದಿ:ಪಿ.ಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಮಧ್ಯಾಹ್ನದ ಬಿಸಿ ಊಟ ನೀಡಲು ಸರ್ಕಾರ ಚಿತಂನೆ



















