ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಫೆಬ್ರವರಿ 29 ರಂದು ಪ್ರಾರಂಭಿಸಲಾದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಸೂರ್ಯ ಘರ್ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. 75,021 ಕೋಟಿ ರೂ. ಯೋಜನೆಯಡಿಯಲ್ಲಿ ತಮ್ಮ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿರುವ ಹಲವಾರು ನಿವಾಸಿಗಳೊಂದಿಗೆ ಮೋದಿ ಸಂವಾದ ನಡೆಸಿ, ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಸತಿ ಗೃಹಗಳು ತಮ್ಮ ಸ್ವಂತ ವಿದ್ಯುತ್ ಉತ್ಪಾದಿಸಲು ಅನುವು ಮಾಡಿಕೊಡುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಿಂದಾಗಿ ವಿದ್ಯುತ್ ವೆಚ್ಚದಲ್ಲಿ ಉಳಿತಾಯವಾಗುತ್ತದೆ. ನವೀಕರಿಸಬಹುದಾದ ಶಕ್ತಿಯ ಸದ್ಬಳಕೆಯಾಗುವುದು, ಮನೆಗಳಿಗೆ ಉಚಿತ ವಿದ್ಯುತ್ ಸಿಗುವುದು. ಪ್ರಧಾನಿ ಮೋದಿ ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ನಾನು ಇತ್ತೀಚೆಗೆ ಗುಜರಾತ್ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ ಎಂದು ಹೇಳಿದ್ದಾರೆ.