ಪ್ರಧಾನಿ ನರೇಂದ್ರ ಮೋದಿ ಅವರು ಯುವಕರು ರಾಜಕೀಯಕ್ಕೆ ಬರುವಂತೆ ಕರೆ ನೀಡಿದ್ದಾರೆ.
ಸ್ವಾತಂತ್ರ್ಯ ಚಳವಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ಸಮಾಜದ ಎಲ್ಲಾ ವರ್ಗದ ಜನ ಭಾಗವಹಿಸಿದ್ದರು. ಅದೇ ಮನೋಭಾವವನ್ನು ನಾವು ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು ಪುನರುಜ್ಜೀವನಗೊಳಿಸಬೇಕಿದೆ ಎಂದು 113ನೇ ಕಂತಿನ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಯುವಜನರು ರಾಜಕೀಯಕ್ಕೆ ಸೇರಲು ಸಿದ್ಧವಿದ್ದಾರೆ. ಅವರಿಗೆ ಸರಿಯಾದ ಅವಕಾಶ ಹಾಗೂ ಮಾರ್ಗದರ್ಶನದ ಅಗತ್ಯವಿದೆ ಎಂದು ಹೇಳಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಬಾಹ್ಯಾಕಾಶ ಸ್ಟಾರ್ಟ್‌ಅಪ್‌ಗಳನ್ನು ಮುನ್ನಡೆಸುತ್ತಿರುವ ಹಲವು ಯುವ ಉದ್ಯಮಿಗಳ ಕೆಲಸವನ್ನು ಹಾಗೂ ದೇಶದಲ್ಲಿ ಪ್ರಗತಿ ಕಾಣುತ್ತಿರುವ ಬಾಹ್ಯಾಕಾಶ ವ್ಯವಸ್ಥೆಯನ್ನು ಶ್ಲಾಘಿಸಿದರು.
ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ‘ಲಖ್‌ಪತಿ ದೀದಿ’ಗಳ ಜತೆಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ 2,500 ಕೋಟಿ ರೂ. ಆವರ್ತ ನಿಧಿಯನ್ನು ಬಿಡುಗಡೆ ಮಾಡಿದರು ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಅನುಕೂಲವಾಗುವಂತೆ 5,000 ಕೋಟಿ ರೂಪಾಯಿಗಳ ಬ್ಯಾಂಕ್ ಸಾಲ ವಿತರಿಸಿದರು. ಲಕ್‌ಪತ್ ದೀದಿ ಯೋಜನೆ ಕೇವಲ ಮಹಿಳೆಯರ ಆದಾಯವನ್ನು ಹೆಚ್ಚಿಸುವುದಲ್ಲ, ಮುಂದಿನ ಪೀಳಿಗೆಯನ್ನು ಸಬಲೀಕರಣಗೊಳಿಸುವ ಉದ್ದೇಶವನ್ನು ಕೂಡ ಹೊಂದಿದೆ. ದೇಶವು ಆರ್ಥಿಕತೆಯಲ್ಲಿ 3ನೇ ಅತಿ ದೊಡ್ಡ ರಾಷ್ಟ್ರವಾಗಬೇಕೆಂದರೆ ಮಹಿಳೆಯರ ಪಾತ್ರ ದೊಡ್ಡದಿದೆ ಎಂದು ಹೇಳಿದ್ದಾರೆ.