ನವದೆಹಲಿ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ (Pahalgam Terror Attack) ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಭೆ ನಡೆಸಿದ್ದು, ಪಾಕ್ ಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಹಲವು ನಿರ್ಣಯ ಕೈಗೊಂಡಿದ್ದಾರೆ. ಪಾಕಿಸ್ತಾನಿಯರು ಭಾರತ ಬಿಟ್ಟು ಹೋಗಲು 48 ಗಂಟೆಗಳ ಸಮಯಾವಕಾಶ ನೀಡಲಾಗಿದೆ. ಪಾಕಿಸ್ತಾನಿಯರಿಗೆ ವೀಸಾ ಇಲ್ಲ ಎನ್ನಲಾಗಿದೆ.
ಇಂದು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಿದ್ದರು. ಉಗ್ರರಿಗೆ ಕುಮ್ಮಕ್ಕು ನೀಡುವ ಮೂಲಕ ಕಾಶ್ಮೀರ ಕಣಿವೆಯಲ್ಲಿ 26 ಜನರನ್ನು ಬಲಿ ಪಡೆಯಲು ಬೆಂಬಲ ನೀಡಿದ ಪಾಕಿಸ್ತಾನಕ್ಕೆ ಭಾರತ ತಕ್ಕ ತಿರುಗೇಟು ನೀಡಿದೆ.
ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣವಾಗಿ ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುತ್ತದೆ. ಅಟ್ಟಾರಿ ಚೆಕ್ ಪೋಸ್ಟ್ ಮುಚ್ಚಲಾಗುವುದು, ಸಿಂಧೂ ಜಲ ಒಪ್ಪಂದವನ್ನು ತಕ್ಷಣವೇ ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ. ಅಲ್ಲದೇ, ಈ ವೇಳೆ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಮೋದಿ ಸರ್ಕಾರ ತೆಗೆದುಕೊಂಡ ನಿರ್ಧಾರಗಳು:
– ಸಿಂಧೂ ಜಲ ಒಪ್ಪಂದ ಸ್ಥಗಿತ.
– ಅಟ್ಟಾರಿ-ವಾಘಾ ಗಡಿ ಮುಚ್ಚುವುದು.
– ಭಾರತಕ್ಕೆ ಪಾಕಿಸ್ತಾನಿ ಪ್ರಜೆಗಳಿಗೆ ಪ್ರವೇಶವಿಲ್ಲ
- ಪಾಕಿಸ್ತಾನಿಯರಿಗೆ ವೀಸಾ ಇಲ್ಲ. ಪಾಕಿಸ್ತಾನಿಗೆ ಭಾರತ ತೊರೆಯಲು 48 ಗಂಟೆಗಳ ಕಾಲಾವಕಾಶ
– ಪಾಕಿಸ್ತಾನ ಹೈಕಮಿಷನ್ ಹೈಕಮಿಷನ್ ಬಲವನ್ನು 30ಕ್ಕೆ ಇಳಿಸಲಾಗಿದೆ.


















