ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಮುಂಚಿತವಾಗಿ ಪ್ರಧಾನಿಯವರು ನಗರದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ.
ನ.28ರ ಬೆಳಗ್ಗೆ 9ಕ್ಕೆ ಆದಿ ಉಡುಪಿಯ ಹೆಲಿಪ್ಯಾಡ್‌ಗೆ ಪ್ರಧಾನಿ ಮೋದಿಯವರು ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಉಡುಪಿ ಕೃಷ್ಣ ಮಠಕ್ಕೆ ತೆರಳಲಿದ್ದಾರೆ. ಈ ಮಧ್ಯೆ ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನಿಂದ ಬನ್ನಂಜೆ, ಸಿರಿಬೀಡು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕದವರೆಗೂ ರೋಡ್ ಶೋ ನಡೆಸುವ ಸಾಧ್ಯತೆ ಹೆಚ್ಚಿದೆ.
ಪ್ರಧಾನಿ ಮೋದಿಯವರ ಕಾರ್ಯಕ್ರಮ ಹಾಗೂ ರೋಡ್ ಶೋ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿಕೊಳ್ಳುತ್ತಿದೆ. ಇನ್ನು ಲಕ್ಷ ಕಂಠ ಗೀತಾ ಪಾರಾಯಣ ನಡೆಯುವ ಸ್ಥಳದ ಸ್ವಚ್ಛತಾ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ರೋಡ್ ಶೋ ಪೂರ್ವಭಾವಿಯಾಗಿ ಈಗಾಗಲೇ ಬಿಜೆಪಿ ಪ್ರಮುಖರ ಸಭೆಯನ್ನು ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಸಲಾಗಿದೆ. ಇನ್ನು, ಅಧಿಕೃತ ಮೂಲಗಳಿಂದ ಅಂತಿಮ ಸೂಚನೆ ಬಂದ ಮೇಲೆ ರೋಡ್ ಶೋಗೆ ಇನ್ನಷ್ಟು ವ್ಯವಸ್ಥೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ | ICT ಕೋರ್ಟ್ ಮಹತ್ವದ ಆದೇಶ



















