ಪ್ರಧಾನಿ ನರೇಂದ್ರ ಮೋದಿ ನಾಳೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಮೋದಿ ಬೆಳಗ್ಗೆ 10.05ಕ್ಕೆ ಎಚ್ಎಎಲ್ ಏರ್ ಪೋರ್ಟ್‌ಗೆ ಆಗಮಿಸಲಿದ್ದಾರೆ. ಬೆಳಗ್ಗೆ 10.45ಕ್ಕೆ ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12.40ಕ್ಕೆ ತಾವರಕೆರೆ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 1.15ಕ್ಕೆ ಐಐಎಂಬಿ ಆಡಿಟೋರಿಯಂಗೆ ತೆರಳಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಸಂಜೆ 6 ಗಂಟೆಗೆ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ.



















