ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ವೈಭವ್ ಸೂರ್ಯವಂಶಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ.
ಖೇಲೋ ಇಂಡಿಯಾ ಯುವ ಕ್ರೀಡಾಕೂಟ ಸಮಾರಂಭ ಉದ್ಧೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ. ‘ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಡೀ ದೇಶದ ಗಮನ ಸೆಳೆದಿದ್ದಾರೆ. ಅವರು ಹೆಚ್ಚು ಆಟವಾಡಿದಷ್ಟೂ ಹೆಚ್ಚು ಪ್ರಕಾಶಮಾನವಾಗಿ ಹೊಳೆಯುತ್ತಾರೆ. ಬಿಹಾರದ ಮಗ ವೈಭವ್ ಸೂರ್ಯವಂಶಿಯ ಪ್ರದರ್ಶನ ಎಲ್ಲರೂ ನೋಡಿದ್ದೇವೆ. ವೈಭವ್ ಅತ್ಯಂತ ಕಿರಿಯ ವಯಸ್ಸಿನಲ್ಲಿ ಇಷ್ಟೊಂದು ದೊಡ್ಡ ದಾಖಲೆ ನಿರ್ಮಿಸಿದ್ದಾರೆ. ಅವರ ಯಶಸ್ಸಿನ ಹಿಂದೆ ಅವರ ಕಠಿಣ ಪರಿಶ್ರಮವಿದೆ. ಒಬ್ಬರು ಹೆಚ್ಚು ಆಟವಾಡಿದಷ್ಟೂ ಅವರು ಹೆಚ್ಚು ಯಶಸ್ಸನ್ನು ಸಾಧಿಸುತ್ತಾರೆ ಎಂದು ಹೇಳಿದ್ದಾರೆ.
ರಾಜಸ್ಥಾನದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಟಿ20 ಕ್ರಿಕೆಟ್ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.