ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 18ನೇ ಕಂತಿನ ಹಣವನ್ನು ಇಂದು ಬಿಡುಗಡೆ ಮಾಡಿದರು.
ಮಹಾರಾಷ್ಟ್ರದ ವಾಶಿಮ್ ನಲ್ಲಿ ಬಿಡುಗಡೆ ಮಾಡಿದರು. ಈ ಮಹತ್ವದ ಘಟನೆಯು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಆರ್ಥಿಕ ಪ್ರಯೋಜನ ಒದಗಿಸಿದೆ.
ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್, ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚವ್ಹಾಣ್, ರಾಜೀವ್ ರಂಜನ್ ಸಿಂಗ್, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವರು ಇದ್ದರು.
2019ರ ಫೆಬ್ರವರಿ 24ರಂದು ಪ್ರಾರಂಭವಾದ PM-KISAN ಯೋಜನೆಯು 3 ಸಮಾನ ಕಂತುಗಳಲ್ಲಿ ಭೂಮಿ ಹೊಂದಿರುವ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ಒದಗಿಸಲಾಗುತ್ತದೆ.