ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಹತ್ತಿರ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, 7 ಜನರ ಸ್ಥಿತಿ ಚಿಂತಾಜನಕವಾಗಿದೆ.
ಕಲಬುರಗಿಯಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಬಸ್ ನಲ್ಲಿ (Bus) 37 ಜನ ಪ್ರಯಾಣಿಸುತ್ತಿದ್ದರು. ಆದರೆ, ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಇದರಿಂದಾಗಿ ಇಬ್ಬರು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಾಯದಿಂದ ಬಸ್ ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ಹಲವರ ಸ್ಥಿತಿ ಚಿಂತಾಜನಕವಾಗಿದೆ.