ವಯನಾಡು: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ತಮ್ಮ ಕ್ಷೇತ್ರದ ಮತದಾರರಿಗೆ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ.
ಇಂದು 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ (Kerala) ವಯನಾಡ್ ಲೋಕಸಭಾ (Wayanad) ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಹೀಗಾಗಿ ಇಂದು ಪ್ರಿಯಾಂಕಾ ಗಾಂಧಿ ಅವರು ವಯನಾಡಿಗೆ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರೀತಿಯ ಸಹೋದರ, ಸಹೋದರಿಯರೇ ಎಲ್ಲರೂ ಮತ ಚಲಾಯಿಸಿ, ಇಂದು ಪ್ರಜಾಪ್ರಭುತ್ವದ ತೀರ್ಪಿನ ದಿನ. ಮತಗಟ್ಟೆಗೆ ಭೇಟಿ ನೀಡಿ, ಅಮೂಲ್ಯವಾದ ಹಕ್ಕನ್ನು ಚಲಾಯಿಸಿ. ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ ಕೈ ಜೋಡಿಸೋಣ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಹೃದಯಪೂರ್ವಕ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ವಯನಾಡಿನಲ್ಲಿ ತುರುಸಿನಿಂದ ಮತದಾನ ನಡೆಯುತ್ತಿದೆ. ರಾಹುಲ್ ಗಾಂಧಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ನಂತರ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡು ವಯನಾಡಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವುಗೊಂಡ ವಯನಾಡ್ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದೆ. ಒಟ್ಟು 16 ಅಭ್ಯರ್ತಿಗಳು ಕಣದಲ್ಲಿದ್ದಾರೆ.