ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕೇರಳದ ಸೀರೆಯುಟ್ಟು ಕೈಯಲ್ಲಿ ಸಂವಿಧಾನ ಹಿಡಿದು ಪ್ರಿಯಾಂಕಾ ಗಾಂಧಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆ ಪ್ರವೇಶಿಸಿದ್ದು, ವಯನಾಡ್ ಸಂಸದೆಯಾಗಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇಂದು ಪ್ರಿಯಾಂಕಾ ಗಾಂಧಿ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ಪ್ರಿಯಾಂಕಾ ಅವರು ಕೇರಳದ ಬ್ರೋಕೆಡ್ ಸೀರೆ ಧಿರಿಸಿ, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ತಾಯಿ ಸೋನಿಯಾ ಗಾಂಧಿ, ಪತಿ ವಾದ್ರಾ ಸಾಥ್ ನೀಡಿದರು. ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಇದ್ದರು.