ಉಡುಪಿ: ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಹೇಶ್ ತಿಮರೋಡಿ ಒಂದು ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಇಂದು (ಶನಿವಾರ, ಆ.23) ಆದೇಶಿಸಿದೆ.
ಸಹಾಯಕ ಸರಕಾರಿ ಅಭಿಯೋಕರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಲಯದ ಮುಂದೆ ನಿವೇದಿಸಿಕೊಂಡಿದ್ದಾರೆ. ವಕೀಲರ ವಕಾಲತ್ತು ಆಲಿಸಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾ. ನಾಗೇಶ್ ಎನ್.ಎ. ಆದೇಶಿಸಿದ್ದಾರೆ.
ಪೊಲೀಸರು ಮುಂದಿನ ಒಂದು ಗಂಟೆಯೊಳಗೆ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.