ಮಡಿಕೇರಿ: ಆಸ್ತಿ ವಿಚಾರವಾಗಿ ಶುರುವಾದ ಕಲಹ ಸಹೋದರನ ಕೊಲೆಯಲ್ಲಿ ಅಂತ್ಯವಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಭ್ಯತ್ ಮಂಗಲ(AbyathMangala) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಳಂಬೆ(Kolambe) ವಿನು ಬೆಳ್ಯಪ್ಪ(53) ಸಾವನ್ನಪ್ಪಿರುವ ವ್ಯಕ್ತಿ ಎನ್ನಲಾಗಿದೆ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಅಣ್ಣ ಮಣಿ ಹಿಂದಿನಿಂದ ಬಂದು ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.
ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು(Madikeri Rural Police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.