ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ (Hemavathi Express Canal Link) ವಿವಾದ ದೊಡ್ಡ ಮಟ್ಟದ ಕಾವು ಪಡೆದಿದೆ. ಕುಣಿಗಲ್ ಹೊರತುಪಡಿಸಿ ಜಿಲ್ಲೆಯ ಉಳಿದ ಪ್ರದೇಶಗಳಲ್ಲಿ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಗೆ (Protest) ಅವಕಾಶವಿಲ್ಲದಂತೆ ನಿಷೇಧಾಜ್ಞೆ ಹೇರಲಾಗಿದೆ.
ಕೆನಾಲ್ ಯೋಜನೆ ಮೂಲಕ ರಾಮನಗರಕ್ಕೆ ನೀರು ಹರಿಸಲು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಗುಬ್ಬಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಅಪಾರ ಸಂಖ್ಯೆಯಲ್ಲಿ ರೈತರು ಕೂಡ ಭಾಗವಹಿಸಿದ್ದಾರೆ. 144 ಸೆಕ್ಷನ್ ನಿಷೇಧಾಜ್ಞೆ ಇದ್ದರೂ ರೈತರು ಹೋರಾಟದಲ್ಲಿ ಭಾಗಿಯಾಗಿ ಆಕ್ರೋಶ ಹೊರ ಹಾಕುತ್ತಿದದಾರೆ. ಗುಬ್ಬಿ, ನಿಟ್ಟೂರು ಸೇರಿದಂತೆ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಗುಬ್ಬಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.