ಬೆಂಗಳೂರು | ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧದ ವಿರುದ್ಧ ಮಾಧ್ಯಮ ಪ್ರತಿನಿಧಿಗಳು ಇಂದು ಮೌನ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧ-ವಿಕಾಸಸೌಧದ ಮಧ್ಯದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಸಮೀಪ ಧರಣಿ ಮಾಡಿದ ಪತ್ರಕರ್ತರು, ಕಪ್ಪು ಬಟ್ಟೆ ಧರಿಸಿ, ಮುಖಕ್ಕೆ ಕಪ್ಪು ಮಾಸ್ಕ್ ಹಾಕಿಕೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ನಿರ್ಧಾರ ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದ್ದಾರೆ. ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿಧಿಸಿರುವ ನಿರ್ಬಂಧವನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಮುಕ್ತ ಪ್ರವೇಶ ಅಗತ್ಯವಿದ್ದು, ಪಾರದರ್ಶಕತೆ ಕಾಪಾಡಲು ಇದು ಮುಖ್ಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಸ್ಥಳದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ಶಾಂತಿಯುತವಾಗಿಯೇ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವ ಬಗ್ಗೆ ಮಾಧ್ಯಮ ಸಂಘಟನೆಗಳು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ : ಎಪ್‌ಸ್ಟೀನ್‌ನ ಕರಾಳ ರಹಸ್ಯ ಬಿಚ್ಚಿಟ್ಟ ಸಂತ್ರಸ್ತೆ ರೀನಾ ಓ | ಪ್ರಿನ್ಸ್ ಆಂಡ್ರ್ಯೂ ಬಂಧನಕ್ಕೆ ಹರ್ಷ


















