ಬೆಂಗಳೂರು | ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜನಾರ್ಧನ್ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಆದರೆ, ಈಗ ಮತ್ತೆ ಕೆಲಸಕ್ಕೆ ಹಾಜರಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿದ್ದ ಎಂ. ಜನಾರ್ಧನ್‌ರನ್ನು ಕೂಡಲೇ ವಜಾ ಮಾಡುವಂತೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಜನಾರ್ಧನ್ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಅವರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕಿದ್ದ ಸಚಿವರೇ ಗಪ್ ಚುಪ್ ಆಗಿದ್ದಾರೆ. ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಅಕ್ರಮ ಆಸ್ತಿ ಮಾಡಿರುವುದು ಪತ್ತೆಯಾಗಿದೆ.
ಇಷ್ಟಾದರೂ ಮತ್ತೆ ಸಮಾಜ ಕಲ್ಯಾಣ ಇಲಾಖೆಯೇ ಕೆಆರ್ ಇಐಎಸ್ ನಲ್ಲಿ ಉನ್ನತ ಹುದ್ದೆಯಲ್ಲಿ ಜನಾರ್ಧನ್ ಮುಂದುವರೆದಿದ್ದಾರೆ. ಇದಕ್ಕೆ ಸಚಿವ ಮಹಾದೇವಪ್ಪ ಅವರ ಕೃಪಾಕಟಾಕ್ಷವಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಜನಾರ್ಧನ್ ಕೋಟಿಗಟ್ಟಲೇ ಆಸ್ತಿ ಹೊಂದಿದ್ದು, ತನಿಖೆಗೆ ಆಗ್ರಹಿಸಲಾಗಿದ್ದು, ಅವರನ್ನು ಕೆಲಸದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಕಾಡಾನೆ ಸೆರೆಗೆ ಹೋಗಿದ್ದ ಅರ್ಜುನ ಕಾಡಿನ ಪಾಲು!



















