ಕುಂದಾಪುರ : ಬಿಜೆಪಿ ಕುಂದಾಪುರ ಮಂಡಲದ ಕಾರ್ಯಾಲಯದಲ್ಲಿ ಏಕ ವಿನ್ಯಾಸ ನಕ್ಷೆಯ ಅವ್ಯವಸ್ಥೆಯ ವಿರುದ್ಧ ಧರಣಿಯ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾಯನಾಡಿ, ಜು.೨೮ರಂದು ಜಿಲ್ಲಾ ಮಟ್ಟದ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಕಾಡುತ್ತಿರುವ ಜ್ವಲಂತ ಸಮಸ್ಯೆಗಲ ಬಗ್ಗೆ ಹೋರಾಟ ಮಾಡುವ ಮೂಲಕ ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ಸರ್ಕಾರದ ಕಣ್ಣು ತೆರೆಸುವ ಕೆಲಸ ಆಗಬೇಕಾಗಿದ್ದು, ನಮೂನೆ ೯/೧೧ ಇದರ ಅಧಿಕಾರ ಈ ಹಿಂದೆ ಇದ್ದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ನೀಡುವ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನೀರ್ಮೂಲನೆ ಮಾಡಲು ಪಕ್ಷದ ಎಲ್ಲಾ ಪದಾಧಿಕಾರಿಗಳು ಅಣಿಯಾಗಬೇಕು ಎಂದು ಹೇಳಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಅಮೂಲ್ಯ ಸಲಹೆ ಸೂಚನೆ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಇದರ ಏಕ ವಿನ್ಯಾಸ ನಕ್ಷೆಯ ಸಮಸ್ತ ನಾಗರಿಕರು ಕೂಡ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹೇಳಿದರು.