ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿ ಸಾವು- ನೋವು ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸರ್ಕಾರವು ಪೊಲೀಸ್ ಕಮಿಷನರ್ ಬಿ.ದಯಾನಂದ್ (B.Dayanand) ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರು ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ
ಹೆಡ್ ಕಾನ್ಸ್‌ಟೇಬಲ್ (Head Constable) ನರಸಿಂಹರಾಜು ಸರ್ಕಾರದ ನಡೆ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡಲು ತೆರಳಿದ್ದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ.
ದೂರಿನಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸುವ ಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಬರೆದಿದ್ದಾರೆ. ಆದರೆ, ಹೆಡ್ ಕಾನ್ಸ್ ಟೇಬಲ್ ನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.



















