ಬೆಂಗಳೂರು: ಹಳದಿ ಮೆಟ್ರೋ ಲೈನ್ ವಿಳಂಬದ ವಿರುದ್ಧ ಬಿಜೆಪಿ ಸದಸ್ಯರು ಲಾಲ್ ಬಾಗ್ ಪೂರ್ವ ದ್ವಾರದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ಬಿಜೆಪಿ ಶಾಸಕರು, ಸಂಸದರು ಪ್ರತಿಭಟನೆ ನಡೆಸಿದ್ದಾರೆ. ಲಾಲ್ ಬಾಗ್ ಪೂರ್ವದ್ವಾರದ ಬಳಿ ಜಮಾಯಿಸಿದ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಲಾಲ್ ಬಾಗ್ ನಿಂದ ಶಾಂತಿನಗರದ ಬಿಎಂಆರ್ ಸಿಎಲ್ ಎಂಡಿ ಕಚೇರಿವರೆಗೆ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ.
ಹಳದಿ ಲೈನ್ ಮೆಟ್ರೋ ವಿಳಂಬವಾಗುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಜನಪ್ರತಿನಿಧಿಗಳಿಗೆ, ಬಿಜೆಪಿ ಮುಖಂಡರು ಹಾಗೂ ನೂರಾರು ಬೆಂಬಲಿಗರು ಸಾಥ್ ನೀಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರು, ಶಾಸಕರು, ಭಾಗಿಯಾಗಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.



















