ಬೆಂಗಳೂರು: ವಿಪ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಪ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸರು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಗೂಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಘೋಷಣೆ ಕೂಗಲಾಗಿದೆ.
ಈ ಸರ್ಕಾರ ದಲಿತರ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎದು ಪ್ಲೇ ಕಾರ್ಡ್ಸ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆ.ಆರ್. ಪುರಂ ಶಾಸಕ ಭೈರತಿ ಬಸವರಾಜ್ ಕೂಡ ಇದ್ದರು.