ಕಬ್ಬಿನ ಬಿಲ್ ಪಾವತಿಸುವಂತೆ ಆಗ್ರಹಿಸಿ ರೈತರು ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ,.
ರಾಷ್ಟ್ರೀಯ ಹೆದ್ದಾರಿಯಲ್ಲಿನ ಗದ್ದನಕೇರಿ ಕ್ರಾಸ್ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕಬ್ಬು ಕಳಿಸಿ 6 ತಿಂಗಳಾದರೂ ಕಾರ್ಖಾನೆ ಮಾಲೀಕರು ಬಿಲ್ ಪಾವತಿಸುತ್ತಿಲ್ಲ. ಜಿಲ್ಲೆಯಲ್ಲಿ ಒಟ್ಟು 13 ಕಬ್ಬು ಕಾರ್ಖಾನೆಗಳಿವೆ. ಆದರೂ ಇಲ್ಲಿಯವರೆಗೆ ಕಬ್ಬಿನ ಬಿಲ್ ಪಾವತಿ ಮಾಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.



















