ಎಸ್ಐಆರ್ ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಭೆ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಈ ಹೋರಾಟ ನಡೆಯುತ್ತಿದ್ದು, ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ, ಕೋಮುವಾದ ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ರಾಜ್ಯಮಟ್ಟದ ನಂತರ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ಪ್ರತಿಭಟನೆ ವಿಕೇಂದ್ರೀಕರಣಗೊಳ್ಳಲಿದೆ ಎಂದಿದ್ದಾರೆ.


















