ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ದಾವಣಗೆರೆಯಲ್ಲಿ ವಿನೂತನ ಪ್ರತಿಭಟನೆ ನಡೆಸಲಾಗಿದೆ. ಇಲ್ಲಿನ ಜಗಳೂರಿನ ಅಣಬೂರಿನ ಪ್ರೌಢಶಾಲೆ ಮಕ್ಕಳು ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಹೋರಾಟಕ್ಕಿಳಿದಿದ್ದಾರೆ.
ಇಂದು ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಮನೋಹರ್ ರೆಡ್ಡಿ ಮನೆ ಮುಂದೆ ವಿದ್ಯಾರ್ಥಿಗಳೇ ಅಡುಗೆ ಮಾಡಿ ಪ್ರತಿಭಟನೆ ಮಾಡಿದ್ರು. ಶಾಲೆಯಲ್ಲಿ ಇಂಗ್ಲಿಷ್, ಹಿಂದಿ ವಿನಾ ಬೇರೆ ವಿಷಯಗಳಿಗೆ ಖಾಯಂ ಶಿಕ್ಷಕರಿಲ್ಲ. ಹೀಗಾಗಿ ಕಲಿಕೆಗೆ ಸಮಸ್ಯೆ ಆಗ್ತಿದೆ. ಕೂಡಲೇ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹೋರಾಟ ನಡೆಸಿದ್ರು. ಮಕ್ಕಳ ಈ ಹೋರಾಟಕ್ಕೆ ಶಾಸಕ ದೇವೇಂದ್ರಪ್ಪ ಕೂಡಾ ಸಾಥ್ ನೀಡಿದ್ದು ವಿಶೇಷವಾಗಿತ್ತು.