ಹುಬ್ಬಳ್ಳಿ: ಕೃಷಿ ಪಂಪ್ ಸೆಟ್ ಗಳಿಗೆ ತ್ರಿ ಫೇಸ್ ವಿದ್ಯುತ್, ಟಿಸಿ ಸಮಸ್ಯೆ, ಬಾಕಿ ಬಿಲ್ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಬೇಡಿಕೆಗೆ ಆಗ್ರಹಿಸಿ ಹೆಸ್ಕಾಂ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಧಾರವಾಡ ಜಿಲ್ಲೆಯ ಗ್ರಾಮಾಂತರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ನವನಗರದ ಎಪಿಎಂಸಿಯಿಂದ ಆರಂಭವಾದ ಪ್ರತಿಭಟನೆ ಹೆಸ್ಕಾಂ ಕಚೇರಿವರೆಗೆ ಸಾಗಿತು. ಟ್ರ್ಯಾಕ್ಟರ್ ಮತ್ತು ಚಕ್ಕಡಿ, ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ರೈತರು, ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕರ್ತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಮಾಜಿ ನಾಗರಾಜ್ ಛಬ್ಬಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ರಾಜ್ಯ ಸರ್ಕಾರ ಹಾಗೂ ಸಂತೋಷ್ ಲಾಡ್ ವಿರುದ್ಧ ಘೋಷಣೆ ಕೂಗಿ, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಲಾಯಿತು.