ಬೆಂಗಳೂರು: ಸೋನು ನಿಗಮ್ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೇಳುತ್ತಿದೆ.

ಗಾಯಕ ಸೋನು ನಿಗಮ್ ಬಂಧನಕ್ಕೆ ಒತ್ತಾಯಿಸಿ ನಾಳೆ ಕರವೇ ಪ್ರತಿಭಟನೆ ಹಮ್ಮಿಕೊಂಡಿದೆ. ಸೋನು ನಿಗಮ್ ಬಂಧನಕ್ಕಾಗಿ ನಾಳೆ ಬೆಳಗ್ಗೆ 11ಕ್ಕೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕೂಡಲೇ ಸೋನು ನಿಗಮ್ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನೂರಾರು ಜನ ಕರವೇ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.


















