ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪಾಕ್ ಪ್ರಜೆಗಳನ್ನು ಹೊರ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ತೊಲಗಲಿ ತೊಲಗಲಿ ಪಾಕಿಸ್ತಾನದ ಪ್ರಜೆಗಳು ತೊಲಗಲಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪಾಕಿಸ್ತಾನ ಪ್ರಜೆಗಳನ್ನು ಕೂಡಲೇ ಗುರುತಿಸಿ ಆ ದೇಶಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಲಾಯಿತು.