ಬೆಂಗಳೂರು: ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು(Anganwadi workers) ಇಲ್ಲಿಯ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟ ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ ಎಂಬ ಆರೋಪವನ್ನು ಇತ್ತೀಚೆಗಷ್ಟೇ ಹೋರಾಟಗಾರರು ಮಾಡಿದ್ದರು. ಈಗ ಮತ್ತೊಂದು ಬಣ ಹೋರಾಟಕ್ಕೆ ಸಿದ್ಧವಾಗಿದೆ.
ಇಂದಿನಿಂದ ಅಂಗನವಾಡಿಯ ಮತ್ತೊಂದು ಬಣ ಪ್ರತಿಭಟನೆ(protest) ಹಮ್ಮಿಕೊಂಡಿದೆ. ಇಂದಿನಿಂದ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಕಾರ್ಯಕರ್ತೆಯರು ಮುಂದಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ AITUC ಹೋರಾಟ ಮಾಡುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಫ್ರೀಡಂ ಪಾರ್ಕ್(Freedom Park) ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಸಂಬಳದ ಆರನೇ ಗ್ಯಾರಂಟಿ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಯಕರ್ತೆಯರಿಗೆ 15 ಸಾವಿರ ಹಾಗೂ ಸಹಾಯಕಿಯರಿಗೆ 10 ಸಾವಿರ ರೂ. ಗೌರವ ಧನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರವು ನಮ್ಮ ಬೇಡಿಕೆ ಈಡೇರಿಸುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.