ಶಿವಮೊಗ್ಗ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಹತ್ಯೆಯಾಗಿರುವ ಘಟನೆ ಈಗ ಭಾರತದಲ್ಲೂ ದೊಡ್ಡ ಮಟ್ಟದ ಪ್ರತಿಭಟನೆಗೆ ಕಾರಣವಾಗಿದೆ. ಈ ಹತ್ಯೆಯನ್ನು ಖಂಡಿಸಿ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅಂಜುಮನ್-ಎ-ಫೈಜಾನ್-ಎ-ಹುಸೈನಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಅಲಿ ಖಮೇನಿ ಅವರ ಭಾವಚಿತ್ರಗಳನ್ನು ಪ್ರದರ್ಶಿಸುವುದರ ಜೊತೆಗೆ, ಕಪ್ಪು ಬಾವುಟ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಹಿಡಿದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ನಂತರ ಪತ್ರಿಕಾ ಪ್ರಕಟನೆಯನ್ನು ಬಿಡುಗಡೆ ಮಾಡಿ ಖಮೇನಿ ಅವರ ನಿಧನದಿಂದ ಜಗತ್ತಿನಾದ್ಯಂತ ಇರುವ ಅವರ ಅಭಿಮಾನಿಗಳ ಹೃದಯಗಳು ದುಃಖದಿಂದ ತುಂಬಿವೆ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಸಂತ್ರಸ್ತರ ಪರವಾಗಿ ಧ್ವನಿ ಎತ್ತುತ್ತಿದ್ದ ಹಾಗೂ ಅನ್ಯಾಯದ ಮುಂದೆ ಎಂದೂ ತಲೆಬಾಗದ ಧೈರ್ಯಶಾಲಿ ನಾಯಕ ಇಬ್ರಾಹಿಂ ಅಲಿ ಖಮೇನಿ ಅವರ ಸೇವೆ ಮತ್ತು ತ್ಯಾಗವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಅವರ ಚಿಂತನೆಗಳು ಕೇವಲ ಇರಾನ್ ದೇಶಕ್ಕೆ ಸೀಮಿತವಾಗದೆ, ಇಡೀ ಜಗತ್ತಿನ ಜನರಿಗೆ ಭರವಸೆ ಮತ್ತು ಧೈರ್ಯ ನೀಡುವಂತಿರಬೇಕು ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!



















