ಸರ್ಕಾರದ ಬೆಲೆ ಏರಿಕೆ ನೀತಿಯನ್ನು ತೀವ್ರವಾಗಿ ವಿರೋಧಿಸಿರುವ ವಾಟಾಳ್, ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ಸರಿಯಾಗಿ ವೇತನ ಹಾಗೂ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸಾರಿಗೆ ನೌಕರರ ಸಮಸ್ಯೆ ಬಗೆಹರಿಸದೆ ಏಕಾಏಕಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದಕ್ಕೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ದರ ಮತ್ತು ಹಾಲಿನ ದರ ಏರಿಕೆಯಿಂದ ಜನಸಾಮಾನ್ಯರಿಗೆ ಭಾರಿ ತೊಂದರೆಯಾಗಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲೂ ಬಸ್ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು ಎಂದು ಆರೋಪಿಸಿ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಜನಸಾಮಾನ್ಯರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದ್ದಾರೆ.

















