ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯನ್ನು ಜೇನುಕೃಷಿ ತರಬೇತಿ ನೀಡುವುದಾಗಿ ಹೇಳಿ ಆರೋಪಿ ಅಬ್ದುಲ್ ಗಫೂರ್ ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ. ಪೋಷಕರು ಮಗಳನ್ನು ಸುಮಾರು ಎರಡು ತಿಂಗಳ ಹಿಂದೆ ಆರೋಪಿಯ ಮನೆಗೆ ಬಿಟ್ಟು ಹೋಗಿದ್ದು, ಈ ಅವಧಿಯಲ್ಲಿ ಡಿಸೆಂಬರ್ 2ರಿಂದ 19ರವರೆಗೆ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಪೊಲೀಸರು, ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧನ ಮಾಡಲಾಗಿದೆ.
ಇದನ್ನೂ ಓದಿ: ಕೊಲ್ಲೂರು ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್‌ಸೈಟ್ : ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ



















