ಬೆಳಗಾವಿ: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಪಿಎಸ್ ಐ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಪಿಎಸ್ ಐನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಎಸ್ ಐ ಉದ್ದಪ್ಪ ಕಟ್ಟಿಕಾರ ಹಲ್ಲೆ ನಡೆಸಿದ ಪಿಎಸ್ ಐ ಎನ್ನಲಾಗಿದೆ. ಹಲ್ಲೆ ಮಾಡಿರುವ ಕುರಿತು ಪತ್ನಿ ಪ್ರತಿಮಾ ಆರೋಪಿಸಿದ್ದಾರೆ.
ಉದ್ದಪ್ಪ ಯುವತಿ ಜೊತೆಗೆ ಅಕ್ರಮ ಸಂಬಂಧ (extramarital affairs) ಹೊಂದಿರುವುದನ್ನು ಪತ್ನಿ ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರೇ ಪ್ರತಿಮಾ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕಣ್ಣು, ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಸದ್ಯ ಹಲ್ಲೆಗೊಳಗಾದ ಪ್ರತಿಮಾ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಗಾವಿಯ ರಾಮತೀರ್ಥನಗರದಲ್ಲಿ ಪತ್ನಿ ಹಾಗೂ ಮಕ್ಕಳು ಬಾಡಿಗೆ ಮನೆಯಲ್ಲಿದ್ದರು. ಈ ಹಿಂದೆಯೂ ಪತ್ನಿ ಮೇಲೆ ಉದ್ದಪ್ಪ ಕಟ್ಟಿಕಾರ ಹಲವು ಬಾರಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಆಗ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹೀಗಾಗಿ ಕೋರ್ಟ್ ಸೂಚನೆ ಮೇರೆಗೆ ಬೆಳಗಾವಿಗೆ ಬಂದಿದ್ದರು. ಈಗ ಮತ್ತೆ ಅದೇ ರೀತಿಯ ಘಟನೆ ನಡೆದಿದೆ ಎನ್ನಲಾಗಿದೆ.