ತುಮಕೂರು : ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಠಾಣೆ ಪಿಎಸ್‌ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಮೂಲದ ವಕೀಲರ ವಾಹನ ಇದಾಗಿದ್ದು, ವಾಹನ ಬಿಡುಗಡೆಗೆ 1 ಲಕ್ಷ ರೂ. ಲಂಚಕ್ಕೆ ಪಿಎಸ್‌ಐ ಚೇತನ್ ಕುಮಾರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ 11:30ರ ಸುಮಾರಿಗೆ ಕ್ಯಾತಸಂದ್ರ ಬಳಿಯ ನಮಸ್ತೆ ತುಮಕೂರು ಹೋಟೆಲ್‌ನಲ್ಲಿ 40 ಸಾವಿರ ರೂ. ಲಂಚ ಪಡದುಕೊಳ್ಳುತ್ತಿದ್ದಾಗ ಪಿಎಸ್‌ಐ ಚೇತನ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ಪಿಎಸ್‌ಐಯನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರಲ್ಲಿ ಇನ್‌ಸ್ಪೆಕ್ಟರ್ ಟ್ರ್ಯಾಪ್ |
ಇತ್ತೀಚೆಗೆ ಚೀಟಿ ಅವ್ಯವಹಾರ ಪ್ರಕರಣದಲ್ಲಿ ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಪಿ. ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಸಿನಿಮೀಯ ರೀತಿಯಲ್ಲಿ ಇನ್‌ಸ್ಪೆಕ್ಟರ್‌ರನ್ನು ಲೋಕಾಯುಕ್ತ ಟ್ರ್ಯಾಪ್ ಮಾಡಿತ್ತು. ಟ್ರ್ಯಾಪ್‌ಗೂ ಮುನ್ನ ಆರೋಪಿಗಳ ಬಂಧನಕ್ಕೆ ತೆರಳಿದ್ದ ಇನ್ಸ್ಪೆಕ್ಟರ್, ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಐದು ಲಕ್ಷ ಹಣಕ್ಕೆ ಬೇಡಿಕೆಯಿಟ್ಟು, ಮುಂಗಡ 1 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.
ಇದನ್ನೂ ಓದಿ : ಅಜಿತ್ ಪವಾರ್ ಪತ್ನಿ ಸುನೇತ್ರಾ ಪದಗ್ರಹಣ ಕುರಿತು ಶರದ್ ಪವಾರ್ ಹೇಳಿದ್ದೇನು?



















