ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಕಾಮಧೇನುವಿನ ಮೇಲೆ ಕಾಮುಕ ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ.
ರಾಜ್ಯದಲ್ಲಿ ಗೋಹತ್ಯೆಯಂತಹ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಲೇ ಇವೆ. ಈಗ ವಿಕೃತ ಕಾಮಿಯೊಬ್ಬ ಹಸುವಿನ ಮೇಲೆ ಅತ್ಯಾಚಾರವೆಸಗಿರುವ ಹೇಯ ಘಟನೆ ಬೆಳಕಿಗೆ ಬಂದಿದೆ.
ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಹಸುವಿನ ಮೇಲೆ ಅತ್ಯಾಚಾರ ಎಸಗುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಡಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಖಾಸಿಮಸಾಬನಿಂದ ಈ ಸೈಕೋ ದುಷ್ಕೃತ್ಯ ನಡೆದಿದೆ. ಗೋಮಾತೆಯನ್ನು ಅಪವಿತ್ರಗೊಳಿಸಿದ ಮತ್ತು ಧಾರ್ಮಿಕ ಭಾವನೆಯನ್ನು ಕೆರಳಿಸಿರುವ ಪ್ರಕರಣ ದಾಖಲಾಗಿದೆ. ಈ ಕುರಿತು ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.