ಬೆಂಗಳೂರು : ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗಳು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನ ಪರೀಕ್ಷೆಗಳು ಯಶಸ್ಸು ಕಂಡಿದೆ. ನೋಂದಾಯಿತ ವಿದ್ಯಾರ್ಥಿಗಳ ಪೈಕಿ ಶೇ. 96.87ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ – 1 (Second PUC Exam) ಮೊದಲ ದಿನ ಯಾವುದೇ ಅಕ್ರಮಗಳು ವರದಿಯಾಗದೆ ಯಶಸ್ವಿಯಾಗಿ ನಡೆದಿದೆ. ಮೊದಲ ದಿನವಾದ ಇಂದು ಕನ್ನಡ ಮತ್ತು ಅರೇಬಿಕ್ ಪರೀಕ್ಷೆಗಳು ನಡೆಯಿತು.
ಮೊದಲ ಪರೀಕ್ಷೆಗೆ 5,09,085 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಈ ಪೈಕಿ 4,93,132 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಎದುರಿಸಿದ್ದಾರೆ. 15,953 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಗೈರಾಗಿದ್ದಾರೆ.
ಇದನ್ನೂ ಓದಿ : ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ



















