ತೀರ್ಥಹಳ್ಳಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಪರವಾಗಿ ತೀರ್ಥಹಳ್ಳಿ ಜನಾಗ್ರಹ ಸಭೆ ನಡೆಸಲು ನಿರ್ಧರಿಸಲಾಗಿದೆ.
ಧಾರ್ಮಿಕ ಭಾವನೆಗಳಿಗೆ, ಹಿಂದೂ ದೇವಸ್ಥಾನಗಳ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ತೀರ್ಥಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬೃಹತ್ ಜನಾಗ್ರಹ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಕೋಟ್ಯಾಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀ ಮಂಜುನಾಥ ಸ್ವಾಮಿಯ ಪುಣ್ಯ ಸನ್ನಿಧಿಯಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ತರಲು ಒಳ ಸಂಚು ನಡೆಸುತ್ತಿರುವವರ ವಿರುದ್ಧವಾಗಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ತೀರ್ಥಹಳ್ಳಿ ಪಟ್ಟಣದ ಎಪಿಎಂಸಿ ಯಾರ್ಡ್ ಮುಂಭಾಗದಿಂದ ಪ್ರಾರಂಭವಾಗುವ ಈ ಪ್ರತಿಭಟನೆ ಪಟ್ಟಣದ ವಿವಿಧೆಡೆ ಸಂಚರಿಸಿ ಗಾಂಧಿ ಚೌಕದಲ್ಲಿ ಬೃಹತ್ ಸಭೆಯ ಆಯೋಜಿಸಲಾಗುತ್ತಿದೆ.
ಈ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ, ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ಇವರ ಸಹಭಾಗೀತ್ವದಲ್ಲಿ ಪಕ್ಷಾತೀತವಾಗಿ ಈ ಬೃಹತ್ ಪ್ರತಿಭಟನೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ, ಸುಮಾರು 10000 ಕ್ಕೂ ಹೆಚ್ಚು ಮಂದಿ ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎಂದು ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಿಂದೂ ಧರ್ಮವನ್ನು, ಹಿಂದೂ ದೇವಸ್ಥಾನವನ್ನು ಉಳಿಸುವ ನಿಟ್ಟಿನಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಇದರ ಸಂಚಾಲಕರಾಗಿ ಸೊಪ್ಪುಗುಡ್ಡೆ ರಾಘವೇಂದ್ರ ಕಾರ್ಯನಿರ್ವಹಣೆ ಮಾಡಲಿದ್ದಾರೆ.



















