ಚಾಮರಾಜನಗರ: ಪೋನ್ ಮೂಲಕ ಪರಿಚಯವಾಗಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.
ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಐಪಿಸಿ ಕಲಂ 366ರ ಪ್ರಕಾರ 3 ವರ್ಷ, ಪೋಕ್ಸೋ ಕಾಯ್ದೆ ಕಲಂ 12ರ ಪ್ರಕಾರ 1 ವರ್ಷ ಶಿಕ್ಷೆ ವಿಧಿಸಿ ನಗರದ ಅಧಿಕ ಜಿಲ್ಲಾ ಮತ್ತು ಸತ್ರ ಎಫ್ಟಿ ಎಸ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹಿರಿಯೂರು ತಾಲೂಕಿನ ಆರೋಪಿಯೇ ಶಿಕ್ಷೆಗೆ ಒಳಗಾಗಿದ್ದಾನೆ. ಈತ ಫೋನ್ ಮೂಲಕ ಪರಿಚಯವಾಗಿದ್ದ ಅಪ್ರಾಪ್ತೆ ಅಪಹರಿಸಿ ಬಸ್ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಈ ಕುರಿತು ಚಾಮರಾಜನಗರ ಮಹಿಳಾ ಠಾಣೆಯಲ್ಲಿ 2020ರಲ್ಲಿ ಪ್ರಕರಣ ದಾಖಲಾಗಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಸಾಕ್ಷ್ಯಾಧಾರಗಳಿಂದ ಯುವಕನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಈ ಶಿಕ್ಷೆ ವಿಧಿಸಿದೆ.