ಬೆಂಗಳೂರು : ನೀವು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿದ್ದೀರಾ? ಮೆಷಿನ್ ಲರ್ನಿಂಗ್ ನಲ್ಲಿ ನೈಪುಣ್ಯತೆ ಇದೆಯೇ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕಿನಲ್ಲಿ (Punjab and Sind Bank Recruitment 2026) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕ್ಲೌಡ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್
ಒಟ್ಟು ಹುದ್ದೆಗಳು: 8
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 28
ಉದ್ಯೋಗದ ಸ್ಥಳ: ದೇಶಾದ್ಯಂತ
ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಎಐ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಮೆಷಿನ್ ಲರ್ನಿಂಗ್, ಡೇಟಾ ಸೈನ್ಸ್, ಕಂಪ್ಯೂಟರ್ ಸೈನ್ಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 29 ವರ್ಷದಿಂದ 45 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರು ಕನಿಷ್ಠ 8 ವರ್ಷಗಳ ಕಾರ್ಯಾನುಭವ ಹೊಂದಿರಬೇಕು. ಕ್ಲೌಡ್ ಎಂಜಿನಿಯರಿಂಗ್ ನಲ್ಲಿಯೂ ಕೆಲಸ ಮಾಡಿದ ಅನುಭವ ಇರಬೇಕು ಎಂದು ತಿಳಿಸಲಾಗಿದೆ. ಮೂರು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು punjabandsind.bank.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಬೆಂಗಳೂರಿನಲ್ಲಿ ಕೂಡ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ



















