ವಿಜಯನಗರ : ಕಾಮಗಾರಿ ಬಿಲ್ ಮಂಜೂರು ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿ ನಡೆದಿದೆ.
ಹೂವಿನ ಹಡಗಲಿಯ ಮಹೇಶ್ ಹಲಗೇರಿ ಎಂಬ ಗುತ್ತಿಗೆದಾರರು ಲೋಕೋಪಯೋಗಿ ಇಲಾಖೆಯ ಕಾಮಗಾರಿ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿದ್ದರು. ಆದರೆ, ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ದೇವದಾಸ್ ಹಾಗೂ ಅಕೌಂಟೆಂಟ್ ಮಾರುತಿ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಇದರಿಂದ ಬೇಸತ್ತ ಮಹೇಶ್ ಹಲಗೇರಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಎಸ್ ಛಲವಾದಿ ನೇತೃತ್ವದಲ್ಲಿ ಪಿಐಗಳಾದ ರಾಜೇಶ್ ಲಮಾಣಿ, ಅಮರೇಶ್ ಹುಬ್ಬಳ್ಳಿ ಹಾಗೂ ಸಿಬ್ಬಂದಿ ಟ್ರ್ಯಾಪ್ ನಡೆಸಿ, ಲಂಚದ ಹಣ ಸ್ವೀಕರಿಸುವಾಗ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಕೆನಡಾದ ಶಾಲೆಯಲ್ಲಿ ಭೀಕರ ಗುಂಡಿನ ದಾಳಿ | 10 ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ



















