ಬೆಂಗಳೂರು : ಮಾಜಿ ಪ್ರಧಾನಿ ದೇವೆಗೌಡರ ಆರೋಗ್ಯ ಇದೀಗ ಚೇತರಿಕೆಗೊಂಡಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ಮಧ್ಯೆ ಇಂದು ದೇವೆಗೌಡರ ಆರೋಗ್ಯ ವಿಚಾರಿಸಲು ವಿಪಕ್ಷ ನಾಯಕ ಆರ್.ಅಶೋಕ್, ಎಂಎಲ್‌ಸಿ ಸಿ.ಟಿ ರವಿ ಜೊತೆಗೆ ಶಾಸಕ ಮುನಿರತ್ನ ಸೇರಿ ಹಲವು ಗಣ್ಯರು ಪದ್ಮನಾಭ ನಗರದ ನಿವಾಸಕ್ಕೆ ಭೇಟಿ ನೀಡಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ.
ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೆಗೌಡರು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅ.6 ರಂದು ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಡಾ.ಸುದರ್ಶನ್ ಬಲ್ಲಾಳ್ ಅವರು ದೇವೇಗೌಡರಿಗೆ ಚಿಕಿತ್ಸೆ ನೀಡಿದ್ದರು.