ಕೊಪ್ಪಳ: ಜುಲೈ 25 ರಂದು ರಾಬಕೊವಿ ಹಾಲು ಒಕ್ಕೂಟದ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಹೀಗಾಗಿ ಇಬ್ಬರು ಜಿಲ್ಲಾ ಉಸ್ತುವಾರಿ ಸಚಿವರ ಮನವೊಲಿಸಲು ಶಾಸಕ ರಾಘವೇಂದ್ರ ಹಿಟ್ನಾಳ ಕಸರತ್ತು ನಡೆಸುತ್ತಿದ್ದಾರೆ.
ರಾಯಚೂರು ಉಸ್ತುವಾರಿ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ವಿಜಯನಗರ/ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಮನವೊಲಿಕೆಗೆ ಹಿಟ್ನಾಳ ಮುಂದಾಗಿದ್ದಾರೆ.
ಇಬ್ಬರು ಸಚಿವರ ಬಳಿ ಹೊಸದಾಗಿ ಆಯ್ಕೆಯಾದ ನೂತನ ನಿರ್ದೇಶಕರನ್ನು ಹಿಟ್ನಾಳ ಕರೆದೊಯ್ದಿದ್ದಾರೆ. ಈಗಾಗಲೇ ರಾಬಕೊವಿ ಅಧ್ಯಕ್ಷ ಸ್ಥಾನದ ಮೇಲೆ ಹಿಟ್ನಾಳ ಕಣ್ಣೀಟ್ಟಿದ್ದಾರೆ ಎನ್ನಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಲ ಉಸ್ತುವಾರಿ ಸಚಿವರುಗಳನ್ನು ಭೇಟಿ ಮಾಡಿ ಪ್ರಭಾವ ಬೀರಿದ್ದಾರೆ ಎನ್ನಲಾಗಿದೆ.