ಯಕ್ಷಗಾನ ಕ್ಷೇತ್ರದಲ್ಲಿ ಹಿರಿಯ ಭಾಗವತರಾದ ರಾಘವೇಂದ್ರ ಮಯ್ಯ ಅವರು ಪ್ರತಿಷ್ಠಿತ ಕಾಳಿಂಗ ನಾವಡ ” ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬನಶಂಕರಿ ಚೆನ್ನಮ್ಮ ಕೆರೆ ಅಚ್ಚುಕಟ್ಟಿನಲ್ಲಿರುವ ಪರಂಪರ ಆಡಿಟೋರಿಯಂನಲ್ಲಿ ಅಕ್ಟೋಬರ್ 12ರಂದು ನೆಡೆಯುವ ಕಾರ್ಯಕ್ರಮದಲ್ಲಿ ಕಲಾಕದಂಬ ಆರ್ಟ್ ಸೆಂಟರ್ ನಿರ್ದೇಶಕ ರಾಧಾಕೃಷ್ಣ ಉರಾಳ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ. ನಗದು, ಬೆಳ್ಳಿ ವಸ್ತು, ನೆನಪಿನ ಕಾಣಿಕೆಯನ್ನು ಒಳಗೊಂಡಿರುತ್ತದೆ.