ಬೆಂಗಳೂರು : ಲೋಕಸಭಾ ಚುನಾವಣೆ ಅಕ್ರಮದ ವಿರುದ್ಧ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ, ಈಗಾಗಲೇ ರಾಹುಲ್ ಗಾಂಧಿ ಚುನಾವಣಾ ಆಯೋಗದ ಅಕ್ರಮದ ವಿರುದ್ಧ ಧ್ವನಿ ಎತ್ತಿದ್ದಾರೆ. ಕರ್ನಾಟಕದಲ್ಲೂ ಅಕ್ರಮ ಆಗಿದೆ ಎಂದು ಅವರು ಆರೋಪ ಮಾಡಿದ್ದರು. ಆ.04ಕ್ಕೆ ಅವರು ಬರುತ್ತಿದ್ದಾರೆ, ಆಯೋಗಕ್ಕೆ ಮನವಿ ಕೊಡಲಿದ್ದಾರೆ. ಪ್ರತಿಭಟನೆ ರೂಪುರೇಷೆ ಇನ್ನೂ ಅಂತಿಮ ಆಗಿಲ್ಲ. ಸಿಎಂ, ಡಿಕೆಶಿ ಇಬ್ಬರೂ ಪ್ರತಿಭಟನೆ ರೂಪುರೇಷೆ ಅಂತಿಮ ಮಾಡುತ್ತಾರೆ ಎಂದಿದ್ದಾರೆ.
ರಾಹುಲ್ ಗಾಂಧಿ ಫ್ರೀಡಂ ಪಾರ್ಕ್ ನಲ್ಲಿ ಭಾಷಣ ಮಾಡಿ ಅಲ್ಲಿಂದ ಪಾದಯಾತ್ರೆ ಮೂಲಕ ಆಯೋಗಕ್ಕೆ ಹೋಗಿ ಮನವಿ ಕೊಡುತ್ತಾರೆ. ನಗರದಲ್ಲಿ ಪ್ರತಿಭಟನೆಗಳ ಬಗ್ಗೆ ಹೈಕೋರ್ಟ್ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಭಟನೆ ಮಾಡುತ್ತೇವೆ. ಪ್ರತಿಭಟನೆ, ಮೆರವಣಿಗೆಗೆ ಅಗತ್ಯ ಭದ್ರತೆ ಕೊಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.