ರಾಯಚೂರು: ಇಂದಿನಿಂದ ಮೂರು ದಿನಗಳ ಕಾಲ ಎಡೆದೊರೆ ನಾಡಲ್ಲಿ ರಾಯಚೂರು ಜಿಲ್ಲಾ ಉತ್ಸವದ ಸಂಭ್ರಮ ಮನೆಮಾಡಿದ್ದು, ಬಿಸಿಲು ನಾಡಲ್ಲಿ ಸಾಂಸ್ಕೃತಿಕ ಉತ್ಸವದ ಕಳೆ ಕಟ್ಟಿದೆ.
ಎರಡು ದಶಕಗಳ ಬಳಿಕ ನಡೆಯುತ್ತಿರುವ ರಾಯಚೂರು ಜಿಲ್ಲಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಡಾ.ಶರಣಪ್ರಕಾಶ್ ಪಾಟೀಲ, ಸಚಿವ ಎನ್.ಎಸ್.ಭೋಸರಾಜು, ಅವರು ಉತ್ಸವಕ್ಕೆ ಚಾಲನೆ ನೀಡಿದ್ದಾರೆ.
ಫೆ.5-6-7 ಮೂರು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಉತ್ಸವಕ್ಕೆ ರಾಯಚೂರು ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಉತ್ಸವ ಹಿನ್ನಲೆ ನಗರದಾದ್ಯಂತ ಹತ್ತು ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕೃಷಿ ವಿವಿ ರಂಗಂಮದಿರ, ಮಹಿಳಾ ಸಮಾಜ ಆವರಣದಲ್ಲಿ ಕೃಷಿ ಮೇಳ, ಆಹಾರ ಮೇಳ, ಕವಿಗೋಷ್ಠಿ, ಸಂಸ್ಕೃತಿ ಗೋಷ್ಠಿ, ಉರ್ದು ಕವಿಗಳ ಮುಷರಾಯಿ, ನೃತ್ಯ ಪ್ರದರ್ಶನ ಸೇರಿದಂತೆ ಹಲವು ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಸಚಿವರು ಪರಸ್ಪರ ಸಿಹಿ ತಿನ್ನಿಸುವ ಮೂಲಕ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಲಕ್ಷಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದ್ದು, ಉತ್ಸವ ಯಶಸ್ವಿಗೊಳಿಸುವಂತೆ ಸಾರ್ವಜನಿಕರಲ್ಲಿ ಸಚಿವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ಬಂದ ರೈತ!



















