ರಾಯಚೂರು:ಇಪ್ಪತ್ತನಾಲ್ಕು ಗಂಟೆ ಕಾರ್ಯ ನಿರ್ವಹಿಸಬೇಕಾದ ಪಿಎಚ್ಸಿ ರಾತ್ರಿ ಬಂದ್ ಆಗಿರುವ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಂತೆಕಲ್ಲೂರಿನ ಪಿಎಚ್ಸಿ ಮೇಲೆ ಈ ಆರೋಪ ಕೇಳಿಬಂದಿದೆ. ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದರೆ ಬಾಗಿಲು ಬಂದ್ ಆಗಿದ್ದು ಗರ್ಭಿಣಿ ಮಹಿಳೆ ಮತ್ತು ಕುಟುಂಬದವರಿಗೆ ಶಾಕ್ ನೀಡಿದೆ. ಸಹಾಯಕ್ಕಾಗಿ ಇಡೀ ರಾತ್ರಿ ಬಾಗಿಲು ಬಡಿದು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇಪ್ಪತ್ತನಾಲ್ಕು ಗಂಟೆ ಸೇವೆ ನೀಡಬೇಕಾದ ಆರೋಗ್ಯ ಕೇಂದ್ರದಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದೇಕೆ ಎಂಬ ಪ್ರಶ್ನೆ ಮೂಡಿದೆ. ರಾತ್ರಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಎಲ್ಲಿದ್ದರು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ತಕ್ಷಣ ಉತ್ತರಿಸಬೇಕು ಎಂದು ಸಂತ್ರಸ್ತ ಕುಟುಂಬಸ್ಥರು ಒತ್ತಾಯಿಸಿದ್ದಾರೆ.



















