ರಾಯಚೂರು: ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದು ಮಗ ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ನಡೆದಿದೆ.
ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನೇ ಕೊಲೆ ಮಾಡಿ ಪರಾರಿಯಾದ ಪಾಪಿ ಮಗ. ಮದ್ಯದ ನಶೆಯಲ್ಲಿ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕುಮಾರ ಗ್ರಾಮಕ್ಕೆ ತೆರಳಿದ್ದ. ಪಿತ್ರಾರ್ಜಿತ ಮೂರು ಎಕರೆ ಜಮೀನನ್ನು ಅಣ್ಣತಮ್ಮಂದಿರಬ್ಬರಿಗೆ ಪಾಲು ಮಾಡುವಂತೆ ಕುಮಾರ ತಾಯಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದ. ತಾಯಿ ಆಸ್ತಿ ಭಾಗಮಾಡಲು ಒಪ್ಪಿರಲಿಲ್ಲ, ಇದರಿಂದ ಮಾತಿನ ಚಕಮಕಿಯಲ್ಲಿ ಶುರುವಾದ ಗಲಾಟೆ ಹೆತ್ತ ತಾಯಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಘಟನಾ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರ೫ಣ ದಾಖಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
ಇದನ್ನೂ ಓದಿ: 219ನೇ ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ | 11 ದಿನದಲ್ಲಿ ಕೋಟಿ ಕೋಟಿ ಆದಾಯ ಸಂಗ್ರಹ!



















