ರಾಯಚೂರು: ಬಸ್ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹರಿದು ಮಹಿಳೆಯು ಸಾವನ್ನಪ್ಪಿದ ದುರ್ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸೋಮವಾರ ಸಿಂಧನೂರು ಬಸ್ ನಿಲ್ದಾಣದಲ್ಲಿ ಈ ಅಪಘಾತ ಸಂಭವಿಸಿದೆ.
ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತದ ದೃಶ್ಯವನ್ನು ಕಂಡ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಈ ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಕಾಲೇಜು ಹುಡುಗನ ಮೇಲೆ ಯುವಕರ ಗ್ಯಾಂಗ್ ಹಲ್ಲೆ



















