ಬೆಂಗಳೂರು: ನೀವು ರಾಯಚೂರು ಜಿಲ್ಲೆಯವರಾ? ಬಿಇ ಅಥವಾ ಬಿ.ಟೆಕ್ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ರಾಯಚೂರಿನಲ್ಲಿರುವ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ (Raichur Zilla Panchayat Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಟೆಕ್ನಿಕಲ್ ಕೋ-ಆರ್ಡಿನೇಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯಿತಿ, ರಾಯಚೂರು
ಹುದ್ದೆ ಹೆಸರು: ಟೆಕ್ನಿಕಲ್ ಕೋ-ಆರ್ಡಿನೇಟರ್ ಇತ್ಯಾದಿ
ಒಟ್ಟು ಹುದ್ದೆ: 09
ಉದ್ಯೋಗ ಸ್ಥಳ: ರಾಯಚೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 24
ಎರಡು ಟೆಕ್ನಿಕಲ್ ಕೋ-ಆರ್ಡಿನೇಟರ್, ಎರಡು ತಾಲೂಕು ಎಂಐಎಸ್ ಕೋ-ಆರ್ಡಿನೇಟರ್, ಎರಡು ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ಸ್ ಹಾಗೂ ಎರಡು ಕಂಪ್ಯೂಟರ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ zpraichur.karnataka.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ: 946 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್



















