ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ, ಬೆಂಗಳೂರಿನಲ್ಲೇ ವೃತ್ತಿಜೀವನ ಆರಂಭಿಸಬೇಕು ಎಂಬ ಬಯಕೆ ಇದೆಯೇ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ರೈಲ್ವೆ ಇಲಾಖೆಯ ಘಟಕವಾಗಿರುವ ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ (Rail Wheel Factory Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ರೈಲ್ ವ್ಹೀಲ್ ಫ್ಯಾಕ್ಟರಿ
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 26
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಬೆಂಗಳೂರಿನ ಯಲಹಂಕದಲ್ಲಿ ರೈಲ್ ವ್ಹೀಲ್ ಫ್ಯಾಕ್ಟರಿ ಘಟಕವಿದೆ. ಸ್ಫೋರ್ಟ್ಸ್ ಕೋಟಾ ಅಡಿಯಲ್ಲಿ ಒಂದು ಟೆಕ್ನಿಶಿಯನ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅಭ್ಯರ್ಥಿಗಳಿಗೆ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ rwf.indianrailways.gov.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ The Assistant Personnel Officer-IV’, Personnel Department, Rail Wheel Factory (Ministry of Railways), Administrative Building, Yelahanka, Bangalore 560064 ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಇದನ್ನೂ ಓದಿ : ಬೆಳಗಾವಿ | ಅಸಲಿ ಪತ್ರಕರ್ತರ ಸೋಗಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್.. ಖದೀಮರ ಹೆಡೆಮುರಿ ಕಟ್ಟಿದ ಖಾಕಿ!



















