ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ, ಬೆಂಗಳೂರಿನಲ್ಲೇ ವೃತ್ತಿಜೀವನ ಆರಂಭಿಸಬೇಕು ಎಂಬ ಬಯಕೆ ಇದೆಯೇ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ರೈಲ್ವೆ ಇಲಾಖೆಯ ಘಟಕವಾಗಿರುವ ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ (Rail Wheel Factory Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ರೈಲ್ ವ್ಹೀಲ್ ಫ್ಯಾಕ್ಟರಿ
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 17
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಬೆಂಗಳೂರಿನ ಯಲಹಂಕದಲ್ಲಿ ರೈಲ್ ವ್ಹೀಲ್ ಫ್ಯಾಕ್ಟರಿ ಘಟಕವಿದೆ. ಇಲ್ಲಿ ಒಂದು ಸ್ಪೋರ್ಟ್ಸ್ ಪರ್ಸನ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅಭ್ಯರ್ಥಿಗಳಿಗೆ 25 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ rwf.indianrailways.gov.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ To Assistant Personnel Officer-I, Rail Wheel Factory (Indian Railways) Yelahanka, Bangalore -560064 ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಇದನ್ನೂ ಓದಿ :ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ಎಂಜಿನಿಯರ್ ಗಳ ನೇಮಕಾತಿ: ಬೆಂಗಳೂರಲ್ಲೇ ಉದ್ಯೋಗ!



















